ಈ (ಗಣಿತದ ಸ್ಥಿರಾಂಕ)

testwikiದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು

ಈ (e) ಎಂಬ ಸಂಖ್ಯೆ ಗಣಿತದ ಅತಿ ಮಹತ್ತ್ವಪೂರ್ಣ ಸಂಖೆಗಳಲ್ಲಿ ಒಂದು. e ಸಾಮಾನ್ಯ ಲಘುಗಣಕದ (natural logarithm) ಆಧಾರವೆಂದು ವಿವರಿಸಲಾಗಿದೆ. ಇತಿಹಾಸದಲ್ಲಿ ೧೭ ನೇ ಶತಮಾನದಿಂದ e ಇನ ಮೊದಲ ಉಪಯೋಗವು ಬಡ್ಡಿ ಲೆಕ್ಕಾಚಾರಕ್ಕಾಗಿ ಕಾಣಲಾಗಿದೆ. ತರುವಾಯ ಲೇಖನಗಳಲ್ಲಿ ಗಣಿತಜ್ನ ಲಿಯೊನಾರ್ಡ್ ಯೂಲರ್ e ನ ಬಹಳಷ್ಟು ಗುಣಗಳನ್ನು ಆವಿಷ್ಕರಿಸಿದರಿಂದ eನ್ನು 'ಯೂಲರಿನ ಸ್ಥಿರಾಂಕ' (Euler's constant) ಎಂದೂ ಕರೆಯಲಾಗುತ್ತದೆ. ಇದರ ಪ್ರಥಮ ಆವಿಷ್ಕಾರಕ ಜ್ಯಾನ್ ನೇಪಿಯರ್ ಆಗಿದ್ದರಿಂದ ಇದನ್ನು 'ನೇಪಿಯರಿನ ಸ್ಥಿರಾಂಕ' (Napier's constant) ಎಂಬ ಹೆಸರಿನಿಂದಲೂ ಕರೆಯಲಾಗುತ್ತಿತ್ತು ಆದರೆ ಆಧುನಿಕ ಗಣಿತ ಶಾಸ್ತ್ರಸಮೂಹದಲ್ಲಿ ಈ ಹೆಸರು ಉಪಯೋಗದಲ್ಲಿ ಇಲ್ಲ. π,i,0,1 ಸಂಖ್ಯೆಗಳ ಜೊತೆ e ಸಂಖ್ಯೆಯೂ ಗಣಿತದ ಪ್ರತ್ಯೊಂದು ಕ್ಶೇತ್ರದಲ್ಲಿ ಅತಿ ಮಹತ್ತ್ವೆಪೂರ್ಣವು ಹಾಗೂ ಉಪಯುಕ್ತವಾಗಿದೆ. e ಸಂಖ್ಯೆ 2.71828... ಎಂದು ಶುರುವಾಗುತ್ತದೆ. ಆದರೆ ಈ ದಾಶಮಿಕ ನಿರೂಪಣೆ ಇಷ್ಟಕ್ಕೆ ನಿಲ್ಲುವುದಿಲ್ಲ ಏಕೆಂದರೆ π,2 ಅಂತೆಯೇ e ಒಂದು 'ಟ್ರಾನ್ಸೆನ್ಡೆನ್ಟಲ್' (transcendental) ಸಂಖ್ಯೆ. ಈ ಗುಣದ ಕಾರಣ e ಪೂರ್ವಾನ್ಕದ ಮೂಲಕ ಬರೆದಿರುವ ಯಾವುದೇ ಪೊಲಿನೊಮಿಯಲ್ ಸಮೀಕರಣೆಯ (polynomial equation with integer coefficients) ಉತ್ತರವಾಗಲಾರದು. ೫೦ ದಾಶಮಿಕ ಸ್ಥಾನಗಳ ತನಕ, e=2.71828182845904523536028747135266249775724709369995...

ವಿವರಣೆ

e ಸಾಮಾನ್ಯ ಲಘುಗಣಕದ ಆಧಾರ. ಅದೆಂದರೆ lne=1. e ನ್ನು ಇನ್ನೊಂದು ರೀತಿಯಲ್ಲಿ ವಿವರಿಸಬಹುದು: (1+1/n)n ಎಂಬ ಪದವನ್ನು n ಹೆಚ್ಚಿಸಿ ಲೆಕ್ಕ ಮಾಡಿದರೆ ಕೊನೆಯಲ್ಲಿ ಈ ಶ್ರೇಣಿಯಲ್ಲಿರುವ ಎಲ್ಲ ಸಂಖ್ಯೆಗಳು ಒಂದೇ ಸಂಖ್ಯೆಯನ್ನು ಸಮೀಪಿಸುತ್ತವೆ. ಈ ಕೊನೆಯ ಸಂಖ್ಯೆ e ಎಂದು ಸಿದ್ಧ ಪಡಿಸಲಾಗಿದೆ. ಸಂಕೇತದಲ್ಲಿ, limn>(1+1/n)n=e ಈ ವಿವರಣೆ ನೀಡಿದ ಗಣಿತಜ್ನ ಸ್ವಿಟ್ಜರ್ಲಾಂಡ್ ದೇಶದ ಜೇಕಬ್ ಬರ್ನುಇಲ್ಲಿ.

ಇತಿಹಾಸ

೧೬೧೮ ರಲ್ಲಿ ಸ್ಕಾಟ್ಲೆಂಡ್ ಇನ ಗಣಿತಜ್ನ ಹಾಗೂ ಭೌತವೈಜ್ನಾನಿ ಜಾನ್ ನೇಪಿಯರ್ ಲಘುಗಣಕ (logarithm) ಗಳ ಬಗ್ಗೆ ಪುಸ್ತಕದ ಅನುಬಂಧದಲ್ಲಿ e ಆಧಾರದಲ್ಲಿರುವ ಲಘುಗಣಕದ ಪಟ್ಟಿಯೂ ನೀಡಿದರು ಆದರೆ ಆಧಾರ ಆಗಿದ್ದ ಸಂಖ್ಯೆಯ ಬಗ್ಗೆ ಹೆಚ್ಚು ವಿವರಿಸಲಿಲ್ಲ. ಇದನ್ನು ಮೊದಲು ಮಾಡಿದವನು ಜೇಕಬ್ ಬರ್ನುಇಲ್ಲಿ. ಬರ್ನುಇಲ್ಲಿ ಸಂಯುಕ್ತ ಬಡ್ಡಿ ಲೆಕ್ಕಾಚಾರದಲ್ಲಿ (compound interest) ಸಮಸ್ಯೆಯೊಂದನ್ನು ವಿವೇಚಿಸುತ್ತಿದ್ದನು. ನಿಮ್ಮ ಹತ್ತಿರ ಒಂದು ರುಪಾಯುವಿದೆ. ಅದಕ್ಕೆ ೧೦%, ೧%, ೦.೧% ಸಂಯುಕ್ತ ಬಡ್ಡಿ ೧೦, ೧೦೦, ೧೦೦೦ ತಿಂಗಳಿಗೆ ಹಾಕಿದರೆ ಈ ಸಮಯದ ನಂತರ ನಿಮಗೆ ೨.೫೯, ೨.೭೦೪, ೨.೭೧೬ ವಾಪಸ್ಸು ಬರುವುದು. ಅರ್ಥವೆಂದರೆ ೧ ರುಪಾಯಿಗೆ 1n% ಬಡ್ಡಿ n ತಿಂಗಳಿಗಿಟ್ಟರೆ, n ಅನಂತವಾದರೆ ನಮ್ಮ ಹತ್ತಿರ ಇರುವ ಹಣ ೨.೭೧೮೨೮... ಸಂಖ್ಯೆಯ ಹತ್ತಿರ ಬರುವುದು. ಈ ತತ್ವವನ್ನು ಬರ್ನುಇಲ್ಲಿ ಮೊದಲು ಆವಿಷ್ಕರಿಸಿದನು. [] ಇದರ ನಂತರ ಯೂಲರ್ ಈ ಸಂಖ್ಯೆಗೆ e ಎಂಬ ಪ್ರತೀಕವನ್ನು ನೀಡಿ ಲಘುಗಣಕಕ್ಕೆ ಆಧಾರವಾಗಿ ಉಪಯೋಗಿಸಿದನು.

e ಉಪಯೋಗಿಸುವ ಇತರ ಸಮಾನಾಂತರ ಸೂತ್ರಗಳು

ex

ಪದದ ಟೇಲರ್ ಶ್ರೇಣಿಯ ನಿರೂಪಣೆಯನ್ನು (Taylor series representation) ಉಪಯೋಗಿಸಿ ಈ ಸೂತ್ರವು ಬರೆಯಲಾಗುತ್ತದೆ:

ಯೂಲರಿನ ಸೂತ್ರ

ex=1+x+x22!+x33!+...=n=0xnn! ಆದ್ದರಿಂದ, x = 1 ಆದಾಗ e=1+1+12!+13!+...=n=01n!. e ಸಂಖೆಯ ಮೂಲಕ ಕಾಂಪ್ಲೆಕ್ಸ್ ಸಂಖ್ಯೆಗಳ ಮತ್ತು ಟ್ರಿಗೊನಾಮೆಟ್ರಿಕ್ ಪದಗಳ ಮಧ್ಯ ಆಳವಾದ ಸಂಯೋಜನೆಗಳನ್ನು ಯೂಲರ್ ಸಿದ್ಧ ಪಡಿಸಿದನು. ಪ್ರತ್ಯೋಂದು ಸಂಖ್ಯೆ θ ಗೆeiθ=cos(θ)+isin(θ) ಸಮೀಕರಣ ಸತ್ಯವು. ಇದರಲ್ಲಿ θ=π ಸಮೀಕರಣಗೊಂಡರೆ ವಿಶೇಷ ನಿದರ್ಶನವಾಗಿ eiπ+1=0 ಎಂದಾಗುವುದು. ಈ ಸಮೀಕರಣವನ್ನು ಭೌತವೈಜ್ಞಾನಿ ರಿಚರ್ಡ್ ಫೈನ್ಮನ್ (Richard Feynman) 'ಗಣಿತದ ಅತಿ ಗಮನಾರ್ಹವಾದ ಸೂತ್ರ' ಎಂದು ಕೊಂಡಾಡಿದ್ದಾರೆ.[]

ಉಲ್ಲೇಖನಗಳು

ಉಲ್ಲೇಖಗಳು

ಟೆಂಪ್ಲೇಟು:ಉಲ್ಲೇಖಗಳು