ಕ್ರಮಗುಣಿತ

testwikiದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು
ಕೆಲವು ಆಯ್ದ ಸಂಖ್ಯೆಗಳ ಕ್ರಮಗುಣಿತ ಸರಣಿ ಟೆಂಪ್ಲೇಟು:OEIS; ತುಂಬಾ ದೊಡ್ಡ ಸಂಖ್ಯೆಗಳನ್ನು ವೈಜ್ಞಾನಿಕ ವಿಧಿಯಲ್ಲಿ ಬರೆಯಲಾಗಿದೆ.
n n!
0 1
1 1
2 2
3 6
4 24
5 120
6 720
7 ಟೆಂಪ್ಲೇಟು:Gaps
8 ಟೆಂಪ್ಲೇಟು:Gaps
9 ಟೆಂಪ್ಲೇಟು:Gaps
10 ಟೆಂಪ್ಲೇಟು:Gaps
11 ಟೆಂಪ್ಲೇಟು:Gaps
12 ಟೆಂಪ್ಲೇಟು:Gaps
13 ಟೆಂಪ್ಲೇಟು:Gaps
14 ಟೆಂಪ್ಲೇಟು:Gaps
15 ಟೆಂಪ್ಲೇಟು:Gaps
16 ಟೆಂಪ್ಲೇಟು:Gaps
17 ಟೆಂಪ್ಲೇಟು:Gaps
18 ಟೆಂಪ್ಲೇಟು:Gaps
19 ಟೆಂಪ್ಲೇಟು:Gaps
20 ಟೆಂಪ್ಲೇಟು:Gaps
25 ಟೆಂಪ್ಲೇಟು:Val
50 ಟೆಂಪ್ಲೇಟು:Val
70 ಟೆಂಪ್ಲೇಟು:Val
100 ಟೆಂಪ್ಲೇಟು:Val
450 ಟೆಂಪ್ಲೇಟು:Val
ಟೆಂಪ್ಲೇಟು:Gaps ಟೆಂಪ್ಲೇಟು:Val
ಟೆಂಪ್ಲೇಟು:Gaps ಟೆಂಪ್ಲೇಟು:Val
ಟೆಂಪ್ಲೇಟು:Gaps ಟೆಂಪ್ಲೇಟು:Val
ಟೆಂಪ್ಲೇಟು:Gaps ಟೆಂಪ್ಲೇಟು:Val
ಟೆಂಪ್ಲೇಟು:Gaps ಟೆಂಪ್ಲೇಟು:Val
ಟೆಂಪ್ಲೇಟು:Gaps ಟೆಂಪ್ಲೇಟು:Val
ಟೆಂಪ್ಲೇಟು:Gaps ಟೆಂಪ್ಲೇಟು:Val
[[googol|ಟೆಂಪ್ಲೇಟು:Val]] 10ಟೆಂಪ್ಲೇಟು:Val

ಗಣಿತದಲ್ಲಿ ಕ್ರಮಗುಣಿತ(factorial) ಎಂಬುದು ಸಾಧಾರಣ ಬಳಕೆಯಲ್ಲಿರುವ ಒಂದು ಪರಿಕಲ್ಪನೆ. n ಎಂಬ ಒಂದು ಋಣಾತ್ಮಕವಲ್ಲದ ಪೂರ್ಣಸಂಖ್ಯೆಯ ಕ್ರಮಗುಣಿತ ಅಥವಾ n! ಹೀಗೆ ಕಂಡುಹಿಡಿಯುತ್ತೇವೆ.

n!=n×(n1)×(n2)×(n3)××3×2×1=n×(n1)!

ಅಂದರೆ, n ಸಂಖ್ಯೆಯಿಂದ ಪ್ರಾರಂಭಿಸಿ ಒಂದನ್ನು ಕಳೆಯುತ್ತಾ ಕೊನೆಗೆ ಅಂಕಿ ಒಂದರವರೆಗೆ ಬರುವುದು. ಹೀಗೆ ಲಭ್ಯವಾದ ಸಂಖ್ಯೆಗಳನ್ನು ಪರಸ್ಪರ ಗುಣಿಸುವುದು. ಉದಾಹರಣೆಗೆ 5! ಕಂಡುಹಿಡಿಯಲು ಕೆಳಗಿನ ಲೆಕ್ಕ ನೋಡಿ.

5!=5×4×3×2×1=120.

ಶೂನ್ಯದ ಕ್ರಮಗುಣಿತವನ್ನು 1 ಎಂದು ನಿರ್ಧರಿಸಲಾಗಿದೆ.[]

ಕ್ರಮಗುಣಿತ ಎಂಬ ಗಣಿತದ ಅನೇಕ ಪ್ರಕಾರಗಳಲ್ಲಿ ಉಪಯುಕ್ತ, ಉದಾಹರಣೆಗೆ ಸಂಚಯ (combinatorics), ಬೀಜಗಣಿತ (algebra) ಮತ್ತು ಗಣಿತೀಯ ವಿಶ್ಲೇಷಣೆ (mathematical analysis). n ವಸ್ತುಗಳನ್ನು ಒಂದು ಸಾಲಿನಲ್ಲಿ n! ವಿಧಗಳಲ್ಲಿ ಜೋಡಿಸಬಹುದು ಎಂಬುದು ಇದಕ್ಕೆ ಹಿನ್ನೆಲೆ. ಉದಾಹರಣೆಗೆ ಇಡ್ಲಿ, ದೋಸೆ, ವಡೆ ಎಂಬ ಮೂರು ವಸ್ತುಗಳನ್ನು ಸಾಲಾಗಿ 6 ವಿಧಗಳಲ್ಲಿ ಜೋಡಿಸಬಹುದು (ಕೆಳಗೆ ನೋಡಿ). 6 = 3! ಎಂಬುದನ್ನು ಗಮನಿಸಿ. ಮೊದಲ ಸ್ಥಾನದಲ್ಲಿ ಕೊಟ್ಟಿರುವ ಯಾವುದೇ ಮೂರು ವಸ್ತುಗಳನ್ನು ಕೂಡಿಸಬಹುದು. ಅನಂತರ ಉಳಿಯುವುದು 2 ವಸ್ತುಗಳು. ಕೊನೆಗೆ ಉಳಿಯುವುದು ಒಂದೇ ಒಂದು. ಹೀಗಾಗಿ ಪ್ರತಿ ಹೆಜ್ಜೆಯಲ್ಲೂ ನಮಗೆ ಇರುವ ಸಾಧ್ಯತೆಗಳು 3, 2, 1. ಒಟ್ಟು ಸಾಧ್ಯತೆಗಳು :3×2×1=6. ಇದನ್ನು ಕುರಿತು ಹನ್ನೆರಡನೇ ಶತಮಾನದ ಭಾರತೀಯ ಗಣಿತಜ್ಞರಿಗೆ ತಿಳಿದಿತ್ತು.[]. n! ಎಂಬ ಗಣಿತ ಸಂಜ್ಞೆಯನ್ನು ಮೊದಲು ಪ್ರಯೋಗಿಸಿದವನು ಕ್ರಿಶ್ಚಿಯನ್ ಕ್ರಾಂಪ್ ಎಂಬ ಫ್ರಾನ್ಸ್ ಮೂಲದ ಗಣಿತಜ್ಞ. (1808)[]

ಇಡ್ಲಿ -ದೋಸೆ -ವಡೆ

ಇಡ್ಲಿ - ವಡೆ - ದೋಸೆ

ದೋಸೆ - ಇಡ್ಲಿ -ವಡೆ

ದೋಸೆ - ವಡೆ - ಇಡ್ಲಿ

ವಡೆ - ಇಡ್ಲಿ -ದೋಸೆ

ವಡೆ - ದೋಸೆ - ಇಡ್ಲಿ

ವ್ಯಾಖ್ಯೆ

'n! ಅಥವಾ n ಕ್ರಮಗುಣಿತ ಎಂಬುದನ್ನು ಹೀಗೆ ವ್ಯಾಖ್ಯೆ ಮಾಡಲಾಗುತ್ತದೆ.

n!=k=1nk=123(n2)(n1)n=n(n1)(n2)(2)(1)

ಇಲ್ಲಿ ಟೆಂಪ್ಲೇಟು:Math ಎಂಬುದು ಒಂದು ಪೂರ್ಣಸಂಖ್ಯೆ. ಮೇಲಿನ ಸಮೀಕರಣದಿಂದ ಒಂದು ಪುನರಾವರ್ತಕ ಸಂಬಂಧ ಅಥವಾ ರಿಕರೆನ್ಸ್ ರಿಲೇಶನ್ ದೊರೆಯುತ್ತದೆ.

(n+1)!=(n+1)n!.

ಉದಾ:

5!=54!6!=65!50!=5049!

0!

ಮೇಲೆ ಕಾಣಿಸಿದ ಪುನರಾವರ್ಥಕ ಸಂಬಂಧವನ್ನು ಸ್ಥಾಪಿಸಲು 0 ಕ್ರಮಗುಣಿತ = 0! = 1 ಎಂಬ 'ವ್ಯಾಖ್ಯೆ ಅಗತ್ಯ.

0!=1

ಹೀಗಾಗಿ

Failed to parse (syntax error): {\displaystyle 1! = 1 \cdot 0! = 1 \.}

ಇದನ್ನು ಹೀಗೂ ಅರ್ಥೈಸಿಕೊಳ್ಳಬಹುದು. ಸೊನ್ನೆ ವಸ್ತುಗಳನ್ನು ಒಂದು ಸಾಲಾಗಿ ಜೋಡಿಸಲು ಕೇವಲ ಒಂದು ರೀತಿಯಲ್ಲಿ ಸಾಧ್ಯ.

ಹಾಗೆ, ಸೊನ್ನೆ ವಸ್ತುಗಳು ಲಭ್ಯವಾದಾಗ ಅವುಗಳಲ್ಲಿ ಸೊನ್ನೆ ವಸ್ತುಗಳನ್ನು ಆಯ್ದುಕೊಳ್ಳುವುದು ಒಂದು ರೀತಿಯಲ್ಲಿ ಮಾತ್ರ ಸಾಧ್ಯ. ಇದನ್ನು ಕೆಳಗೆಕಂಡಂತೆ ಬರೆಯುತ್ತೇವೆ.

(00)=0!0!0!=1.

n ವಸ್ತುಗಳು ಲಭ್ಯವಾದಾಗ ಅವುಗಳಲ್ಲಿ ಎಲ್ಲವನ್ನೂ ಆಯ್ದುಕೊಳ್ಳುವುದು ಕೂಡಾ ಒಂದೇ ರೀತಿಯಲ್ಲಿ ಸಾಧ್ಯ.

(nn)=n!n!0!=1.

0! = 1 ಎಂಬ ವ್ಯಾಖ್ಯೆ ಇರುವುದರಿಂದ ಅನೇಕ ಗಣಿತ ಸಮೀಕರಣಗಳು ಸುಲಭವಾಗುತ್ತವೆ. ಉದಾಹರಣೆಗೆ,

ex=n=0xnn!.

ಪೂರ್ಣವಲ್ಲದ ಸಂಖ್ಯೆಗಳ ಕ್ರಮಗುಣಿತ

ಪೂರ್ಣವಲ್ಲದ ಸಂಖ್ಯೆಗಳಿಗೂ ಕ್ರಮಗುಣಿತ ವ್ಯಾಖ್ಯೆಯನ್ನು ಕೆಲವು ಗಣಿತಜ್ಞರು ನೀಡಿದ್ದಾರೆ.

ಉಪಯೋಗಗಳು

  • n ವಸ್ತುಗಳನ್ನು ಸಾಲಾಗಿ ಜೋಡಿಸಲು n! ವಿಧಾನಗಳಿವೆ. ಇವನ್ನು ಜೋಡಣೆಗಳು ಅಥವಾ ಪರ್ಮುಟೇಶನ್ ಎಂದು ಕೂಡಾ ಕರೆಯುತ್ತೇವೆ.[][]
  • ಕೆಲವು ಗಣಿತ ಸೂತ್ರಗಳಲ್ಲಿ ಕ್ರಮಗುಣಿತ ಎಂಬುದು ಛೇದದಲ್ಲಿ ಕಾಣಿಸಿಕೊಳ್ಳುತ್ತದೆ. ಇದರ ಅರ್ಥ ವಸ್ತುಗಳ ಜೋಡಣೆಯಲ್ಲಿ ಕ್ರಮ ಮುಖ್ಯವಲ್ಲ ಎಂದು. ಇದಕ್ಕೊಂದು ಉದಾಹರಣೆ. n ವಸ್ತುಗಳ ಒಂದು ಸೆಟ್ (ಜೊತೆ) ಇದ್ದರೆ ಅದರಲ್ಲಿ k ವಸ್ತುಗಳ ಸಬ್-ಸೆಟ್‍ಗಳನ್ನು ರಚಿಸಬೇಕಾಗಿದೆ. ಮೊದಲ ವಸ್ತುವನ್ನು n ರೀತಿಯಲ್ಲಿ, ಎರಡನೆಯ ವಸ್ತುವನ್ನು n-1 ರೀತಿಗಳಲ್ಲಿ, ಕೊನೆಗೆ k ಕ್ರಮಾಂಕದ ಸಂಖ್ಯೆಯನ್ನು n-k+1 ರೀತಿಗಳಲ್ಲಿ ಆರಿಸಿಕೊಳ್ಳಬಹುದು. ಆದರೆ ಈ ವಸ್ತುಗಳನ್ನು ಆರಿಸಿ/ಜೋಡಿಸುವ ಕ್ರಮ ಮುಖ್ಯವಲ್ಲ. ಹೀಗಾಗಿ ಒಟ್ಟು ಸಬ್-ಸೆಟ್‍ಗಳ ಸಂಖ್ಯೆ
nk_k!=n(n1)(n2)(nk+1)k(k1)(k2)(1).
ಈ ಸಂಖ್ಯೆಯನ್ನು ದ್ವಿಪದ ಗುಣಾಂಕ ಎನ್ನುತ್ತಾರೆ [] ಮತ್ತು (nk) ಎಂದು ಬರೆಯುತ್ತಾರೆ. ಇದು ದ್ವಿಪದ ಪ್ರಮೇಯದಲ್ಲಿ ಕಾಣಿಸಿಕೊಳ್ಳುವ ಕಾರಣ ಹೀಗೆ ನಾಮಕರಣ ಮಾಡಲಾಗಿದೆ.
  • ಕಲನಶಾಸ್ತ್ರವಿಭಾಗದಲ್ಲೂ ಕ್ರಮಗುಣಿತ ಕಾಣಿಸಿಕೊಳ್ಳುತ್ತದೆ. ಉದಾಹರಣೆಗೆ ಟೇಲರ್ ಸೂತ್ರ,[].
  • ಕ್ರಮಗುಣಿತ ಅತ್ಯಂತ ಸಾಧಾರಣವಾಗಿ ಕಾಣಿಸಿಕೊಳ್ಳುವುದು ಸಂಭವನೀಯತೆ ಎಂಬ ಗಣಿತಪ್ರಕಾರದಲ್ಲಿ.[]
  • ಕ್ರಮಗುಣಿತ ಸಂಖ್ಯೆಯನ್ನು ಹೀಗೂ ಬರೆಯಬಹುದು.
n!=Dn(xn)=dndxn(xn)
ಇಲ್ಲಿ Dnxn ಎಂಬುದು ವ್ಯತ್ಯಾಸ ಎಂಬ ಪ್ರಕ್ರಿಯೆಯ ಸಂಕೇತ.</math>[]

n ದೊಡ್ಡ ಸಂಖ್ಯೆಯಾದಾಗ ಅದರ ಕ್ರಮಗುಣಿತ ಹೇಗೆ ಅಭಿವೃದ್ಧಿ ಹೊಂದುತ್ತದೆ?

'ಫ್ಯಾಕ್ಟೋರಿಯಲ್ ಸಂಖ್ಯೆಯ ಲಾಗರಿತಂನ ಅಭಿವೃದ್ಧಿ ರೇಖೆ

n ದೊಡ್ಡ ಸಂಖ್ಯೆಯಾದಂತೆ ಅದರ ಕ್ರಮಗುಣಿತ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಹೊಂದುತ್ತದೆ. ಈ ವೇಗವು ಮಿಕ್ಕೆಲ್ಲ ಬಹುಪದೋಕ್ತಿಗಳ ಮತ್ತು ಘಾತಿಕಗಿಂತ ಹೆಚ್ಚು. n! ಎಂಬುದನ್ನು ಅಂದಾಜು ಮಾಡಲು ಹಲವು ವಿಧಾನಗಳಿವೆ. ಮೊದಲು n! ಎಂಬುದರ ನೈಜ ಲಘುಗಣಕ ತೆಗೆದುಕೊಂಡರೆ ಪ್ರಾಪ್ತವಾಗುವುದು,

lnn!=x=1nlnx.

ln n! ಎಂಬುದರ ಅಭಿವೃದ್ಧಿಯನ್ನು ಗಮನಿಸಿದಾಗ ಅದು ಒಂದು ಸರಳರೇಖೆಯಂತೆ ತೋರಿದರೂ ಅದು ವಾಸ್ತವವಲ್ಲ. ಮೇಲಿನ ಸೂತ್ರವನ್ನು ಸ್ವಲ್ಪ ಬದಲಾಯಿಸಿದರೆ ln n! ಎಂಬುದರ ಅಂದಾಜು ದೊರೆಯುತ್ತದೆ.

1nlnxdxx=1nlnx0nln(x+1)dx
nln(ne)+1lnn!(n+1)ln(n+1e)+1.
e(ne)nn!e(n+1e)n+1.

ಇದಕ್ಕಿಂತ ಸರಳವಾದ ಅಂದಾಜು ಕೆಲವೊಮ್ಮೆ ಉಪಯುಕ್ತ. ಮೇಲಿನ ಸೂತ್ರವನ್ನು ಬಳಸಿ

(n/3)n<n! ಎಂಬ ಸಂಬಂಧವನ್ನು ಏರ್ಪಡಿಸಬಹುದು; ಹಾಗೆಯೇ n ≥ 6 ಆದಾಗ n!<(n/2)n ಎಂಬ ಸಂಬಂಧವನ್ನು ಏರ್ಪಡಿಸಬಹುದು.
ಕ್ರಮಗುಣಿತ ಸಂಖ್ಯೆಗೆ ಸ್ಟರ್ಲಿಂಗ್ ಅಂದಾಜು

n ದೊಡ್ಡ ಸಂಖ್ಯೆಯಾದಾಗ ಸ್ಟರ್ಲಿಂಗ್ ಅಂದಾಜು ಎಂಬುದನ್ನು ಬಳಸಬಹುದು:

n!2πn(ne)n.

ಇದನ್ನು ಸಿದ್ಧಪಡಿಸಲು ಲಘುಗಣಕ ಸಂಖ್ಯೆಯ ಅಪರಿಮಿತ ಸರಣಿಯನ್ನು ಬಳಸಲಾಗುತ್ತದೆ. ಮತ್ತೊಂದು ಅಸಮಾನತೆಯನ್ನೂ ಗಮನಿಸಿ:

2πn(ne)n<n!<2πn(ne)ne112n.

ಶ್ರೀನಿವಾಸ ರಾಮಾನುಜನ್ ಅವರು ಕೂಡಾ n! ಎಂಬುದಕ್ಕೆ ತಮ್ಮದೇ ಒಂದು ಅಂದಾಜು ನೀಡಿದ್ದಾರೆ ಟೆಂಪ್ಲೇಟು:Harv

lnn!nlnnn+ln(n(1+4n(1+2n)))6+ln(π)2

ಅಥವಾ

n!2πn(ne)n[1+1/(2n)+1/(8n2)]1/6.

ಅಥವಾ

n!2πn(ne)nexp(112n1360n3)

ಉಲ್ಲೇಖಗಳು

ಉಲ್ಲೇಖಗಳು

ಟೆಂಪ್ಲೇಟು:ಉಲ್ಲೇಖಗಳು